Feedback / Suggestions

ABOUT US

                                                                               

       ಕರ್ನಾಟಕದ ಗಡಿ ಭಾಗದಲ್ಲಿ ಶಿಕ್ಷಣಸಂಸ್ಕೃತಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡಪರ ಸಂಘ ಸಂಸ್ಥೆಗಳು ಹಾಗೂ ಕನ್ನಡ ಪರ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ಸಮಸ್ಯೆಗಳು ಮತ್ತು ಸವಾಲುಗಳು ತುಂಬಾ ಗಂಭೀರವಾದುದಾಗಿರುತ್ತವೆಕರ್ನಾಟಕ ರಾಜ್ಯದ ಒಳಗಿರುವ ಗಡಿ ಭಾಗದಲ್ಲಿನ  ಪ್ರದೇಶಗಳ ಅಭಿವೃದ್ಧಿಯ ಜೊತೆಗೆ ಕರ್ನಾಟಕದ ಹೊರಗಿರುವ ಆರು ನೆರೆ ರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಕನ್ನಡ ಪ್ರದೇಶಗಳಲ್ಲಿನ ಕನ್ನಡದ ಕಾಯಕವನ್ನು ಕೈಗೊಳ್ಳುವುದು ತೀರಾ ಅಗತ್ಯವಾಗಿರುತ್ತದೆ.

            ಸುಮಾರು 63 ತಾಲ್ಲೂಕುಗಳನ್ನು ಗಡಿ ಭಾಗದ ತಾಲ್ಲೂಕುಗಳೆಂದು ಗುರುತಿಸಲಾಗಿದೆ(52+11 ಹೊಸ ಗಡಿ ತಾಲ್ಲೂಕುಗಳು) ಇವು ಸುಮಾರು 19 ಗಡಿ ಜಿಲ್ಲೆಗಳ ವ್ಯಾಪ್ತಿಗೆ ಬರುತ್ತವೆ. ಜೊತೆಗೆ ಆರು ನೆರೆ ರಾಜ್ಯಗಳಲ್ಲಿನ ಕರ್ನಾಟಕದ ಗಡಿ ಭಾಗದ ಪ್ರದೇಶವು ಪ್ರಾಧಿಕಾರದ ಕಾರ್ಯವ್ಯಾಪ್ತಿಗೆ ಬರುತ್ತದೆ.

ಈ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರವು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ 12/2010ರಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವನ್ನು ಬೆಂಗಳೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವಂತೆ  2010ರಲ್ಲಿ ಸ್ಥಾಪಿಸಲಾಗಿರುತ್ತದೆ.

       ರಾಜ್ಯದ ಹಾಗೂ ಹೊರರಾಜ್ಯದ ಕನ್ನಡ ಪರ ಸಂಘ/ಸಂಸ್ಥೆಗಳಿಗೆ ಭಾಷಾ ಚಟುವಟಿಕೆಗಳಿಗಾಗಿ ಪ್ರೋತ್ಸಾಹ ನೀಡುವುದು ಹಾಗೂ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಗ್ರಂಥಾಲಯ, ಕ್ರೀಡಾ ಕೊಠಡಿ, ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ, ಇತ್ಯಾದಿ ಸೌಲಭ್ಯಗಳನ್ನು ಪ್ರಾಧಿಕಾರದಿಂದ ಒದಗಿಸಲಾಗುತ್ತಿದೆ.

ಪ್ರಾಧಿಕಾರದ ಆಧಿನಿಯಮ ವೀಕ್ಷಿಸಿ

Last Updated: 09-06-2021 04:39 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : KARNATAKA BORDER AREA DEVELOPMENT AUTHORITY
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080