ಅಭಿಪ್ರಾಯ / ಸಲಹೆಗಳು

ಕಾರ್ಯಚಟುವಟಿಕೆ

ಕಾರ್ಯಚಟುವಟಿಕೆ

      ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು 2010ರಲ್ಲಿ ಅಸ್ತಿತ್ವಕ್ಕೆ ಬಂದಿರುತ್ತದೆ. ಕರ್ನಾಟಕದ ಗಡಿ ಭಾಗದಲ್ಲಿ ಶಿಕ್ಷಣ, ಸಂಸ್ಕೃತಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡಪರ ಸಂಘ ಸಂಸ್ಥೆಗಳು ಹಾಗೂ ಕನ್ನಡಪರ ಕಾರ್ಯನಿರ್ವಹಿಸುತ್ತಿರುವ ಕನ್ನಡಿಗರ ಸಮಸ್ಯೆ ಮತ್ತು ಸವಾಲುಗಳು ತುಂಬಾ ಗಂಭೀರವಾದುದಾಗಿರುತ್ತವೆ. ಕರ್ನಾಟಕ ರಾಜ್ಯದ ಒಳಗಿರುವ ಗಡಿಭಾಗದಲ್ಲಿನ ಪ್ರದೇಶದ ಅಭಿವೃದ್ಧಿಯ ಜೊತೆಗೆ ಕರ್ನಾಟಕದ ಹೊರಗಿರುವ ಆರು ನೆರೆರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಪ್ರದೇಶಗಳಲ್ಲಿಯ ಕನ್ನಡದ ಕಾಯಕವನ್ನು ಕೈಗೊಳ್ಳುವುದು ತೀರಾ ಅಗತ್ಯವಾಗಿರುತ್ತದೆ.

          ಸುಮಾರು 63 ತಾಲ್ಲೂಕುಗಳನ್ನು ಗಡಿ ಭಾಗದ ತಾಲ್ಲೂಕುಗಳೆಂದು ಗುರುತಿಸಲಾಗಿದೆ. ಇವು ಸುಮಾರು 19 ಜಿಲ್ಲೆಗಳ ವ್ಯಾಪ್ತಿಗೆ ಬರುತ್ತವೆ.  ಜೊತೆಗೆ ಆರು ನೆರೆ ರಾಜ್ಯಗಳಲ್ಲಿನ ಕರ್ನಾಟಕದ ಗಡಿ ಭಾಗದ ಪ್ರದೇಶವು ಪ್ರಾಧಿಕಾರದ ಕಾರ್ಯವ್ಯಾಪ್ತಿಗೆ ಬರುತ್ತದೆ. ಗಡಿ ಭಾಗದಲ್ಲಿ ಬರುವ ಪ್ರದೇಶದಲ್ಲಿನ ಕನ್ನಡಿಗರ ಕನ್ನಡ ಸಂಘ ಸಂಸ್ಥೆಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವುದು ಸರ್ಕಾರದ ಕರ್ತವ್ಯವಾಗಿರುತ್ತದೆ. ಹೊರನಾಡು ಮತ್ತು ಒಳನಾಡಿನ ಕನ್ನಡ ಶಾಲೆಗಳಿಗೆ ಅಗತ್ಯವಾದ ಗ್ರಂಥಾಲಯಗಳ ನಿರ್ಮಾಣ, ಶಾಲಾ ಕಟ್ಟಡಗಳ ನಿರ್ಮಾಣ, ಶೌಚಾಲಯಗಳ ನಿರ್ಮಾಣ, ಸಾಂಸ್ಕೃತಿಕ ಭವನ ನಿರ್ಮಾಣ, ಅಗತ್ಯ ರಸ್ತೆಗಳ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ, ಪೀಠೋಪಕರಣಗಳ ಪೂರೈಕೆ ಮುಂತಾದ ತುಂಬಾ ಅಗತ್ಯವಾದ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕಾದುದು ಪ್ರಾಧಿಕಾರದ ಮತ್ತು ಸರ್ಕಾರದ ಕರ್ತವ್ಯವಾಗಿದೆ. ಜೊತೆಗೆ ಈ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ, ವಿಚಾರ ಸಂಕಿರಣಗಳನ್ನೂ ಏರ್ಪಡಿಸುವ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ಈ ಪ್ರದೇಶಗಳಲ್ಲಿ ಜಾಗೃತಿ ಉಂಟು ಮಾಡುವುದು ಪ್ರಾಧಿಕಾರದ ಮತ್ತು ಸರ್ಕಾರದ ಕಾರ್ಯವಾಗಿರುತ್ತದೆ.

ಇತ್ತೀಚಿನ ನವೀಕರಣ​ : 09-04-2021 01:11 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080